ವೇಣೂರು: ಇಲ್ಲಿನ ಶಿವಾಜಿನಗರದ ಶ್ರೀ ದೇವಿ ಆದಿಶಕ್ತಿ ಭಜನಾ ಸೇವಾ ಟ್ರಸ್ಟ್ (ರಿ.) ವತಿಯಿಂದ ನಡೆದ ಕ್ಷೇತ್ರಪಾಲ ಹಾಗೂ ನಾಗದೇವರ ಪ್ರತಿಷ್ಠಾ ಮಹೋತ್ಸವದ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ವೈಭವವು ಅತ್ಯಂತ ವೈಭವದಿಂದ ನೆರವೇರಿತು.

ಈ ಧಾರ್ಮಿಕ ಕಾರ್ಯಕ್ರಮದ ಸಭಾ ವಿಭಾಗದಲ್ಲಿ ಬೆಳ್ತಂಗಡಿಯ ಎಕ್ಸೆಲ್ ಸಮೂಹ ವಿದ್ಯಾಸಂಸ್ಥೆಗಳ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.








