
ಧರ್ಮಸ್ಥಳ: ದಕ್ಷಿಣ ಕನ್ನಡದ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಇಂದು ವಿಶೇಷ ಅತಿಥಿಗಳ ಆಗಮನವಾಗಿತ್ತು. ಸ್ಯಾಂಡಲ್ವುಡ್ನ ‘ಡಿವೈನ್ ಸ್ಟಾರ್’ ರಿಷಬ್ ಶೆಟ್ಟಿ ಅವರು ಪತ್ನಿ ಪ್ರಗತಿ ಶೆಟ್ಟಿ ಅವರೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ.

ವಿಶೇಷ ಪೂಜೆ ಸಲ್ಲಿಸಿ ಕ್ಷೇತ್ರದ ಪಾವಿತ್ರ್ಯತೆಯನ್ನು ಕಣ್ತುಂಬಿಕೊಂಡರು.
ದೇವರ ದರ್ಶನದ ಬಳಿಕ ರಿಷಬ್ ದಂಪತಿ ನೇರವಾಗಿ ಬೀಡಿಗೆ ತೆರಳಿ, ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.


ಡಾ. ಹೆಗ್ಗಡೆಯವರು ದಂಪತಿಯನ್ನು ಆತ್ಮೀಯವಾಗಿ ಬರಮಾಡಿಕೊಂಡರು. ರಿಷಬ್ ಶೆಟ್ಟಿ ಅವರ ಸಿನಿಮಾ ಸಾಧನೆ ಹಾಗೂ ಸಮಾಜಮುಖಿ ಕೆಲಸಗಳ ಬಗ್ಗೆ ಚರ್ಚಿಸಿ, ಅವರಿಗೆ ಫಲಪುಷ್ಪ ನೀಡಿ ಆಶೀರ್ವದಿಸಿದರು.






