ಕೊಕ್ಕಡ: ಸ್ಯಾಂಡಲ್ವುಡ್ನ ‘ಡಿವೈನ್ ಸ್ಟಾರ್’, ಕಾಂತಾರ ಖ್ಯಾತಿಯ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಕ್ಕಡದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

ಸೋಮವಾರ ರಿಷಬ್ ಶೆಟ್ಟಿ ಅವರು ತಮ್ಮ ಪತ್ನಿ ಪ್ರಗತಿ ಶೆಟ್ಟಿ, ತಾಯಿ ರತ್ನಾವತಿ ಹಾಗೂ ಕುಟುಂಬದ ಇತರ ಸದಸ್ಯರೊಂದಿಗೆ ದೇವಸ್ಥಾನಕ್ಕೆ ಆಗಮಿಸಿದರು. ಬಯಲು ಆಲಯದ ಗಣಪ ಎಂದೇ ಖ್ಯಾತಿ ಪಡೆದ ಸೌತಡ್ಕ ಮಹಾಗಣಪತಿಗೆ ರಿಷಬ್ ಶೆಟ್ಟಿ ದಂಪತಿ ವಿಶೇಷ ಪೂಜೆ ಸಲ್ಲಿಸಿ, ಆಶೀರ್ವಾದ ಪಡೆದರು.


ದೇವಸ್ಥಾನದ ಪ್ರಧಾನ ಅರ್ಚಕರಾದ ಸತ್ಯಪ್ರಿಯ ಕಲ್ಲೂರಾಯ ಅವರು ರಿಷಬ್ ಶೆಟ್ಟಿ ಅವರಿಗೆ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ ಗೌರವಿಸಿದರು.






