

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ನ 2025-26ನೇ ಸಾಲಿನ ದ್ವಿತೀಯ ಹಂತದ ಮುಂದೂಡಲ್ಪಟ್ಟ ಗ್ರಾಮಸಭೆಯು ಇದೇ ಬರುವ ಏಪ್ರಿಲ್ 09, ಗುರುವಾರದಂದು ನಡೆಯಲಿದೆ.
ಉಜಿರೆ ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಡಾ. ಯತೀಶ್ ಕುಮಾರ್ ಎಮ್.ಎಸ್., ಪಶುವೈದ್ಯಾಧಿಕಾರಿ, ಪಶು ಆಸ್ಪತ್ರೆ ನೆರಿಯ, ನೋಡೆಲ್ ಅಧಿಕಾರಿಗಳು ಇವರ ಉಪಸ್ಥಿತಿಯಲ್ಲಿ ನಡೆಯಲಿದೆ.

ಗ್ರಾಮದ ಅಭಿವೃದ್ಧಿ ದೃಷ್ಟಿಯಿಂದ ಈ ಸಭೆಯು ಅತ್ಯಂತ ಮಹತ್ವದ್ದಾಗಿದ್ದು, ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ, ಗ್ರಾಮದ ಸಮಸ್ಯೆಗಳ ಚರ್ಚೆ ಹಾಗೂ ಮುಂದಿನ ಕ್ರಿಯಾಯೋಜನೆಗಳ ಬಗ್ಗೆ ಸಭೆಯಲ್ಲಿ ಸಮಾಲೋಚನೆ ನಡೆಯಲಿದೆ. ಗ್ರಾಮದ ಪ್ರತಿಯೊಬ್ಬ ಪ್ರಜೆಯೂ ಗ್ರಾಮಸಭೆಯಲ್ಲಿ ಭಾಗವಹಿಸುವುದು ಅವರ ಹಕ್ಕು ಮತ್ತು ಕರ್ತವ್ಯವಾಗಿದೆ. ಆದ್ದರಿಂದ ಉಜಿರೆ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಸಭೆಯನ್ನು ಯಶಸ್ವಿಗೊಳಿಸಬೇಕು ಎಂದು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ.







