ಉಜಿರೆ: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜು ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗ ಶೇ.100ರಷ್ಟು ಫಲಿತಾಂಶ ದಾಖಲಿಸಿ ಐತಿಹಾಸಿಕ ಸಾಧನೆ ಮಾಡಿದೆ. ಕಾಲೇಜಿನ ಶಿಸ್ತು ಮತ್ತು ಗುಣಮಟ್ಟದ ಶಿಕ್ಷಣಕ್ಕೆ ಈ ಫಲಿತಾಂಶ ಮತ್ತೊಮ್ಮೆ ಸಾಕ್ಷಿಯಾಗಿದೆ.


ಹಂಸಿನಿ ಭಿಡೆ ವಾಣಿಜ್ಯ ವಿಭಾಗದಲ್ಲಿ 595 ಅಂಕ, ಅನ್ಶೂಲ ಶ್ರೇಷ್ಠ ವಾಣಿಜ್ಯ ವಿಭಾಗದಲ್ಲಿ 592 ಅಂಕ, ರಾಮ್ ಚರಣ್ ಎಸ್. ವಾಣಿಜ್ಯ ವಿಭಾಗದಲ್ಲಿ 591 ಅಂಕ, ಅರ್ಪಿತ ಅಡಿಗ ವಾಣಿಜ್ಯ ವಿಭಾಗದಲ್ಲಿ 590 ಅಂಕ, ಅಂಕಿತ ವಿಜ್ಞಾನ ವಿಭಾಗದಲ್ಲಿ 591 ಅಂಕ, ನಿಜ ಕುಲಾಲ್ ಕಲಾ ವಿಭಾಗದಲ್ಲಿ 593 ಅಂಕ ಪಡೆದಿದ್ದಾರೆ.





