ಗುರುವಾಯನಕೆರೆ: ಇತ್ತೀಚೆಗೆ ಪ್ರಕಟಗೊಂಡ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಎಕ್ಸೆಲ್ ಪದವಿ ಪೂರ್ವ ಕಾಲೇಜು ಅದ್ಭುತ ಸಾಧನೆ ಮಾಡಿದೆ.


ಕಾಲೇಜಿನ ವಾಣಿಜ್ಯ ವಿಭಾಗವು ಶೇಕಡಾ 100ರಷ್ಟು ಫಲಿತಾಂಶ ದಾಖಲಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸಿದೆ.

ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಯಾನಾ ಪೊನ್ನಮ್ಮ ಮತ್ತು ಶ್ರೀವತ್ಸ ಧರ್ಮಸ್ಥಳ ತಲಾ 597 ಅಂಕಗಳನ್ನು ಪಡೆಯುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಇವರ ಈ ಸಾಧನೆ ಕಾಲೇಜಿನ ಶೈಕ್ಷಣಿಕ ಗುಣಮಟ್ಟಕ್ಕೆ ಹಿಡಿದ ಕನ್ನಡಿಯಾಗಿದೆ. ಜೊತೆಗೆ ಕಾಲೇಜಿನ 11 ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ. ಪರೀಕ್ಷೆ ಬರೆದ 67ಮಕ್ಕಳಲ್ಲಿ 57 ಮಕ್ಕಳು ಉನ್ನತ ಶ್ರೇಣಿಯಲ್ಲಿ ಪಾಸಾಗಿದ್ದಾರೆ.




