ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜು ಸತತ ಸಾಧನೆಯ ಹಾದಿಯಲ್ಲಿ ಮುನ್ನುಗ್ಗುತ್ತಿದೆ.


ಪ್ರಸಕ್ತ ಸಾಲಿನ ವಿಜ್ಞಾನ ವಿಭಾಗದಲ್ಲಿ ಕಾಲೇಜು ಶೇಕಡಾ 100ರಷ್ಟು ಭರ್ಜರಿ ಫಲಿತಾಂಶ ದಾಖಲಿಸುವ ಮೂಲಕ ಜಿಲ್ಲೆಯ ಗಮನ ಸೆಳೆದಿದೆ. ವಿಜ್ಞಾನ ವಿಭಾಗದ ಅಕ್ಷಯ್ 595 ಅಂಕ ಗಳಿಸಿದ್ರೆ, ಶಿಲ್ಪಿತಾ ಎಚ್ ಎಸ್ ಮತ್ತು ರೋಹಿತ್ ಆರ್ ಎಂ 594 ಗಳಿಸಿದ್ದಾರೆ. ಜೊತೆಗೆ ಕಾಲೇಜಿನ 15ವಿದ್ಯಾರ್ಥಿಗಳು 590ಕ್ಕಿಂತ ಅಧಿಕ ಅಂಕ ಪಡೆದಿದ್ದಾರೆ.

ವಿದ್ಯಾರ್ಥಿಗಳ ಈ ಅದ್ವಿತೀಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ. ಗುರುವಾಯನಕೆರೆಯ ಎಕ್ಸೆಲ್ ಕಾಲೇಜು ಮತ್ತೊಮ್ಮೆ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿದೆ.






