ಬೆಳ್ತಂಗಡಿ: ಕೆಲಸಕ್ಕೆಂದು ಹೋದ ವ್ಯಕ್ತಿಯೊಬ್ಬರು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ.

ಕಳಿಯ ಗ್ರಾಮದ ಪಂಜಿರ್ಪು ನಿವಾಸಿ ದಿವಾಕರ ಪೂಜಾರಿ ಎಂಬವರು ಏ.8 ರಂದು ಎಂದಿನಂತೆ ಬೆಳಿಗ್ಗೆ ಗುರುವಾಯನಕರೆ ಪೇಟೆಯ ಪಗ್ಸ್ ಬಾರ್ ಮತ್ತು ರೆಸ್ಟೋರೆಂಟ್ ಗೆ ಕೆಲಸಕ್ಕೆ ಹೋದವರು ಮಧ್ಯಾಹ್ನ ಸುಮಾರು 12 ಗಂಟೆಯ ಸುಮಾರಿಗೆ ತಾವು ಬಳಸುತ್ತಿದ್ದ ಮೊಬೈಲ್ ಫೋನ್ ಅನ್ನು ಹೋಟೆಲ್ನಲ್ಲಿಯೇ ಬಿಟ್ಟು ಹೊರಗೆ ಹೋದವರು, ಆ ಬಳಿಕ ವಾಪಸ್ ಬಂದಿಲ್ಲ.
ಅವರು ಮನೆಗಾಗಲಿ ಅಥವಾ ಸಂಬಂಧಿಕರ ಮನೆಗಾಗಲಿ ಹೋಗದೆ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ದಿವಾಕರ ಪೂಜಾರಿ ಅವರು ಕಾಣೆಯಾಗಿರುವ ಬಗ್ಗೆ ಅವರ ಪತ್ನಿ ಜ್ಯೋತಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಪತಿಯ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಫೋಟೋದಲ್ಲಿರುವ ವ್ಯಕ್ತಿ ಎಲ್ಲಾದರೂ ಕಂಡುಬಂದಲ್ಲಿ ಅಥವಾ ಅವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ತಕ್ಷಣವೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಈ ಕೆಳಗಿನ ವಿಳಾಸಕ್ಕೆ ಮಾಹಿತಿ ನೀಡುವಂತೆ ಕುಟುಂಬಸ್ಥರು ವಿನಂತಿಸಿದ್ದಾರೆ.






