ಬೆಳ್ತಂಗಡಿ: ಏಕನಿವೇಶನ ಹಾಗೂ 9/11 ಅರ್ಜಿಗಳನ್ನು ದೀರ್ಘಕಾಲದಲ್ಲಿ ಕಚೇರಿಗಳಲ್ಲಿ ಇಟ್ಟುಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ವ್ಯಕ್ತವಾದ ದೂರಿನ ಬಗ್ಗೆ ಇಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಂಗಳೂರಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿ ಮಾಡಿ. ಈ ಸಮಸ್ಯೆ ಬಗ್ಗೆ ಗಮನವನ್ನು ಸೆಳೆದರು.

ಸಚಿವರು ಕೂಡಲೇ ಅಧಿಕಾರಿಗಳೊಂದಿಗೆ ಈ ಸಮಸ್ಯೆ ಬಗ್ಗೆ ಚರ್ಚಿಸಿ ಪ್ರಸ್ತುತ ತಾಲೂಕಿಗೆ ಅಧಿಕಾರಿಗಳು ಒಂದು ದಿನ ಮಾತ್ರ ಭೇಟಿ ನೀಡುತ್ತಿದ್ದು. ಮುಂದಿನ ದಿನಗಳಲ್ಲಿ ಮೂರು ದಿನ ತಾಲೂಕಿಗೆ ಅಧಿಕಾರಿಗಳು ಭೇಟಿ ನೀಡಿ ಅರ್ಜಿಗಳನ್ನು ಅನಗತ್ಯ ವಿಳಂಬ ಮಾಡದೆ ಕಾಲಮಿತಿಯಲ್ಲಿ ಇತ್ಯರ್ಥಗೊಳಿಸುವಂತೆ. ಸೂಚಿಸಿದರು.



ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷರಾದ ಶೇಖರ್ ಕುಕ್ಕೆಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯ ಅಧ್ಯಕ್ಷರಾದ ಸತೀಶ್ ಕೆ ಕಾಶಿಪಟ್ಟ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಾಫಿ ಕಾಶಿಪಟ್ಟಣ ಹಾಗೂ ದೇವಿ ಪ್ರಸಾದ್ ಶೆಟ್ಟಿ ಅಳದಂಗಡಿ, ಸುದರ್ಶನ್ ಮಂಜೀಲ ಆರಂಬೋಡಿ ಉಪಸ್ಥಿತರಿದ್ದರು.




