ಬೆಳ್ತಂಗಡಿ : ನೇತ್ರಾವತಿ ಸ್ನಾನಘಟ್ಟದ ಬಳಿ ಏ.11 ರಂದು ಸಂಜೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಹಚ್ಚಿಗಟ್ಟ ಗ್ರಾಮದ ನಿವಾಸಿ ನರೇಂದ್ರ(50) ಅವರು ತಾನು ತಂದಿದ್ದ ಪೆಟ್ರೋಲ್ ಕ್ಯಾನ್ ನಿಂದ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು.
ತಕ್ಷಣ ಸ್ಥಳೀಯರು ಅವರನ್ನು ರಕ್ಷಿಸಿ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸಾಗಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದರು.
ಇದೀಗ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.







