ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್(ರಿ.) ಗಂಡಿಬಾಗಿಲು, ಇಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯನ್ನು ದಿನಾಂಕ:14.04.2026ರಂದು ಸರಳವಾಗಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿಯಾದ ಶ್ರೀಯುತ ಡಾ. ಯು.ಸಿ. ಪೌಲೋಸ್ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಾ. ಯು.ಸಿ. ಪೌಲೋಸ್ ಅವರು, ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮೌಲ್ಯಗಳು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವೆಂದು ತಿಳಿಸಿ, ಅವರ ಚಿಂತನೆಗಳನ್ನು ಅನುಸರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.







