ಉಜಿರೆ: ವಿದ್ಯಾರ್ಥಿಯೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಉಜಿರೆ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಮೊಹಮ್ಮದ್ ಇಲಿಯಾಸ್ ಅವರ ಎರಡನೇ ಪುತ್ರ, 16 ವರ್ಷದ ಮಹಮ್ಮದ್ ಅಯಾನ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಮಹಮ್ಮದ್ ಅಯಾನ್ ತನ್ನ ಮನೆಯ ಅಪಾರ್ಟ್ ಮೆಂಟ್ ನಲ್ಲಿ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿದ್ದು ,ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







