ಬೆಳ್ತಂಗಡಿ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ತಾವು ಸಲ್ಲಿಸಿದ ದಕ್ಷ ಪ್ರಾಮಾಣಿಕೆ ಸೇವನೆ ಗುರುತಿಸಿ ಕರ್ನಾಟಕ ರಾಜ್ಯ ಸರಕಾರದಿಂದ ನೀಡಲ್ಪಡುವ 2025-2026 ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಚಿನ್ನದ ಪದಕ ಪುರಸ್ಕಾರಕ್ಕೆ ಆಯ್ಕೆಯಾಗಿರುವಂತಹ ಶ್ರೀ ವಿಜಯ ಕುಮಾರ್ ರೈ ಇವರಿಗೆ ರಾಜ ಕೇಸರಿ ಸೇವಾ ಟ್ರಸ್ಟ್ (ರಿ.) ಕರ್ನಾಟಕ ಇದರ ವತಿಯಿಂದ ಸಮಾಜ ರತ್ನ ಎಂಬ ಬಿರುದು ನೀಡಿ ಗೌರವಿಸಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕರಾದ ಸಿಖಂದರ್ ಪಾಷಾ.ಡಿ.ಯನ್., ರಾಜ ಕೇಸರಿ ಸೇವಾ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ , ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ಸಂಚಾಲಕರಾದ ಜಗದೀಶ್ ಲಾಯಿಲ,ಸಹ ಸಂಚಾಲಕರದ ಶರತ್ ಕರಾಯ, ಸಾಂಸ್ಕೃತಿಕ ಕಾರ್ಯದರ್ಶಿಯಾದ ದೇವರಾಜ್ ಪೂಜಾರಿ,. ಕಾರ್ಯದರ್ಶಿಯಾದ ಪ್ರವೀಣ್ ಆಚಾರ್ಯ ಉಪಸ್ಥಿತರಿದ್ದರು.







