ಬೆಂಗಳೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದೆ. ಸರ್ಕಾರ ತೃತೀಯ ಭಾಷಾ ವಿಷಯಕ್ಕೆ ಗ್ರೇಡ್ ಬದಲು ಅಂಕವನ್ನೇ ನೀಡಲು ತೀರ್ಮಾನಿಸಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳ ಪೈಕಿ 94.1% ಪಾಸಾಗಿದ್ದಾರೆ. ಪರೀಕ್ಷೆ ಬರೆದ 7 ಲಕ್ಷದ 70 ಸಾವಿರದ 209 ವಿದ್ಯಾರ್ಥಿಗಳ ಪೈಕಿ 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ದಕ್ಷಿಣ ಕನ್ನಡ ಪ್ರಥಮ, ಉಡುಪಿಗೆ ದ್ವಿತೀಯ ಸ್ಥಾನ ಮತ್ತು ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನ ಪಡೆದಿದೆ. ಕಲಬುರಗಿ ಕೊನೆಯ ಸ್ಥಾನ ಪಡೆದಿದೆ.
ಮೂವರು ವಿದ್ಯಾರ್ಥಿಗಳು 625 ಕ್ಕೆ 625 ಅಂಕ ಗಳಿಸಿದ ಸಾಧನೆ ಮಾಡಿದ್ದಾರೆ. ಹಾಸನದ ಉತ್ಸವ ಪಾಟೀಲ್, ಬೆಳಗಾವಿಯ ರೂಪಾ ಚನ್ನಗೌಡ ಪಾಟೀಲ ಮತ್ತು ಹಾಸನದ ಜಾಹ್ನವಿ ಈ ಸಾಧನೆ ಮಾಡಿದ್ದಾರೆ.




