ಉಪ್ಪಿನಂಗಡಿ: ಬೈಕ್ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೃತರನ್ನು ಹಿರೇಬಂಡಾಡಿ ನಿವಾಸಿ ಲಿಖಿತ್ ಎಂದು ಗುರುತಿಸಲಾಗಿದೆ. ಲಿಖಿತ್ ಅವರು ಬೈಕ್ ನಲ್ಲಿ ಶಾಖೇಪುರ ಎಂಬಲ್ಲಿ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದರು.
ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







