ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಸತತ ಐದು ದಶಕಗಳಿಂದ ನಡೆದುಕೊಂಡು ಬರುತ್ತಿರುವ ‘ಉಚಿತ ಸಾಮೂಹಿಕ ವಿವಾಹ’ ಈ ಬಾರಿ ೫೪ನೇ ವರ್ಷಕ್ಕೆ ಕಾಲಿಟ್ಟಿದೆ.
ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ೨೦೨೬ರ ಏಪ್ರಿಲ್ ೨೯ ರಂದು ಬುಧವಾರ ಸಂಜೆ ಗಂಟೆ ೬.೪೦ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ೫೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು ಎಸ್.ಡಿ.ಯಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿ ಎ.ವಿ. ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಶ್ರೀನಿವಾಸ ರಾವ್, ರಜಪೂತ, ವಿಕಾಸ್ ಆರಿಗ, ಧರ್ಣಪ್ಪ ಮಾಸ್ಟರ್, ಶ್ರೀಮತಿ ರತ್ನಾವತಿ, ಮೋಹನ್ ಶೆಟ್ಟಿ, ಸಂತೋಷ್ ಹಾಗೂ ಶ್ರೀಮತಿ ಪವಿತ್ರ ಸುನಿಲ್ ಮೊದಲಾದವರು ಉಪಸ್ಥಿತರಿದ್ದರು. ಸಾಮೂಹಿಕ ವಿವಾಹದ ಎಲ್ಲಾ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ನಿರ್ವಹಿಸಲಿದ್ದು, ಈ ವರ್ಷ 108 ಜೊತೆ ವಿವಾಹ ನಡೆಯಲಿದೆ.




