ಉಪ್ಪಿನಂಗಡಿ: ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ.
ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಸಹಸವಾರ ಮಹಿಳೆ ಗಂಭೀರ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಮೃತರನ್ನು ಪೆರಿಯಡ್ಕ ನಿವಾಸಿ ಕಾರ್ತಿಕ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.







