ಬಾಗಲಕೋಟೆ : ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಆ ಮೂಲಕ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿಯಾಗಿದ್ದ ವೀರಣ್ಣ ಚರಂತಿಮಠ ಪೈಪೋಟಿ ನೀಡಿದ್ದರಾದರೂ ಅಂತಿಮವಾಗಿ ಸೋಲುಂಡಿದ್ದಾರೆ. ಹೆಚ್.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್, ಮೇಟಿ ಪುತ್ರ ಉಮೇಶ್ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಮೇಟಿ ಅಂತಿಮವಾಗಿ ಗೆದ್ದು ಬೀಗಿದ್ದಾರೆ.
ಬಿಜೆಪಿಯ ವೀರಣ್ಣ ಚರಂತಿಮಠ್ಗೆ ಒಟ್ಟು 76,075 ಮತಗಳು ಬಿದ್ದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೆಟಿ ಪರ 97,941 ವೋಟ್ ಚಲಾವಣೆ ಆಗಿದ್ದವು. ಹೀಗಾಗಿ 21,866 ಮತಗಳ ಅಂತರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ.







