ಉಜಿರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಇಚ್ಚಿಲದಲ್ಲಿರುವ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ (Dumping Yard) ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.
ಬೆಂಕಿಯಿಂದ ಹೆಚ್ಚಿನ ಪ್ರಮಾಣದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಅಗ್ನಿಶಾಮಕದಳದೊಂದಿಗೆ ಪಂಚಾಯಿತಿ ಸಿಬ್ಬಂದಿ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡದ ಸದಸ್ಯರಾದ ರವೀಂದ್ರ ಉಜಿರೆ ಹಾಗೂ ರಾಘವೇಂದ್ರ ಉಜಿರೆ ಬೆಂಕಿ ಹತೋಟಿಗೆ ತರಲು ಸಹಕರಿಸಿದರು.







