ಧರ್ಮಸ್ಥಳ: ಗಿರೀಶ್ ಮಟ್ಟಣ್ಣವರ್ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲ ಮಾನಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಬಗ್ಗೆ ತನಿಖೆಗಾಗಿ ಹಾಜರಾಗಲು ಧರ್ಮಸ್ಥಳ ಪೊಲೀಸರು ನೋಟೀಸ್ ಜಾರಿ ಮಾಡಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸತ್ಯಕ್ಕೆ ದೂರವಾದ ಗಂಭೀರ ಆರೋಪಗಳನ್ನು ಮಾಡುವ ಮೂಲಕ ವ್ಯಕ್ತಿತ್ವಕ್ಕೆ ಕುಂದುತರುವ ಪ್ರಯತ್ನ ನಡೆಸಿ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ಹಾನಿಯುಂಟು ಮಾಡುವ ಪ್ರಯತ್ನ ನಡೆಸಿದ್ದಲ್ಲದೆ ಸಮಾಜದಲ್ಲಿ ವೈರತ್ವ ದ್ವೇಷ ವೈಮನಸ್ಸು ಉಂಟುಮಾಡಲು ಪ್ರಯತ್ನಿಸಿದ ಬಗ್ಗೆ ಧರ್ಮಸ್ಥಳ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 2.18 0 BNS-2023 (u / s – 353(2)) ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.







