ಉಪ್ಪಿನಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ಇಂದು (ಮೇ 9) ರಸ್ತೆ ಕಾಮಗಾರಿ ವೇಳೆ ಸಂಭವಿಸಿದ ಭೀಕರ ಅಪಘಾತವೊಂದು ಕಾರ್ಮಿಕನೊಬ್ಬನ ಪ್ರಾಣವನ್ನು ಬಲಿಪಡೆದಿದೆ. ಗಾಂಧಿಪಾರ್ಕ್ ಸಮೀಪ ಈ ದುರ್ಘಟನೆ ಸಂಭವಿಸಿದೆ.
ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಭಾಗವಾಗಿ ಸರ್ವೀಸ್ ರಸ್ತೆ ನಿರ್ಮಾಣ ಕಾರ್ಯ ನಡೆಯುತ್ತಿತ್ತು. ಈ ವೇಳೆ ರಸ್ತೆ ಬದಿಯಲ್ಲಿ ಮಲಗಿದ್ದ ವ್ಯಕ್ತಿಯ ಮೇಲೆ ರೋಡ್ ರೋಲರ್ ಹರಿದ ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಮೃತದೇಹ ನಜ್ಜುಗುಜ್ಜಾಗಿರುವುದಾಗಿ ಮೂಲಗಳು ತಿಳಿಸಿವೆ.
ಮೃತ ವ್ಯಕ್ತಿ ಉತ್ತರ ಭಾರತದ ಮೂಲದ ಕಾರ್ಮಿಕನಾಗಿರಬಹುದು ಎಂದು ಶಂಕಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.







