ಬೆಳ್ತಂಗಡಿ: ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳ ಕುರಿತು ಪರಿಶೀಲನೆ ನಡೆಸಲು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿಗಳು (DHO) ಇಂದು ಆಸ್ಪತ್ರೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸದಸ್ಯರೊಂದಿಗೆ ಮಹತ್ವದ ಸಭೆ ನಡೆಸಿ, ಕುಂದುಕೊರತೆಗಳ ಬಗ್ಗೆ ಚರ್ಚೆ ನಡೆಸಿದರು.
ತಾಲೂಕು ಆಸ್ಪತ್ರೆಯ ಸಮಸ್ಯೆಗಳ ಬಗ್ಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರಿಗೆ ಮಾಹಿತಿ ನೀಡಲಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಅವರು, ರಾಜ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರ ಗಮನಕ್ಕೆ ಈ ವಿಷಯವನ್ನು ತಂದಿದ್ದರು. ಸಚಿವರ ಸೂಚನೆಯ ಮೇರೆಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಇಂದು ಬೆಳ್ತಂಗಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯರು ವೀರೇಂದ್ರ ಕುಮಾರ್ ಜೈನ್, ನವೀನ್ ಗೌಡ ಸವಣಾಲು, ಸವಿತ ಕೊರಗ, ರಶೀದ್ ಕಕ್ಕಿಂಜೆ ಉಪಸ್ಥಿತರಿದ್ದರು.







