ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರು ತಮ್ಮ ಕುಟುಂಬದವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಮತ್ತು ಸೇವೆಗಳನ್ನು ಸಲ್ಲಿಸಿದರು.
ನಂತರ ವಿಜಯೇಂದ್ರ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರನ್ನು ಭೇಟಿ ಮಾಡಿದರು.
ಈ ಭೇಟಿಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.




