ಕಡಬ: ಟಿವಿ ನೋಡಲು ಹೋದ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಘಟನೆ ಆಲಂಕಾರು ಗ್ರಾಮದಲ್ಲಿ ನಡೆದಿದ್ದು, ಆರೋಪಿಯ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಆಲಂಕಾರು ಗ್ರಾಮದ ಕೊಂಡಾಡಿಕೊಪ್ಪ ನಿವಾಸಿ ಜಗದೀಶ ಕುಂಬಾರ (43 ವರ್ಷ) ಎಂಬಾತನೇ ಆರೋಪಿ. ಏಪ್ರಿಲ್ 28ರಂದು ಬಾಲಕಿಯು ತನ್ನ ನೆರೆಮನೆಗೆ ಟಿವಿ ನೋಡಲೆಂದು ಹೋಗಿದ್ದಳು. ಈ ಸಂದರ್ಭದಲ್ಲಿ ಅಲ್ಲಿಗೆ ಬಂದ ಆರೋಪಿ ಜಗದೀಶ ಯಾನೆ ಜಗ್ಗ, ಬಾಲಕಿಯ ಕೈ ಹಿಡಿದು ಎಳೆದು ಎದೆಗೆ ಕೈ ಹಾಕಿ ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ತಾಯಿ ನೀಡಿದ ದೂರಿನ ಮೇರೆಗೆ ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೆತ್ತಿಕೊಂಡಿದ್ದಾರೆ.







