ಬಂಟ್ವಾಳ: ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಸಿದ್ದಕಟ್ಟೆಯ ಕರ್ಪೆ ಮಾಲುಕೋಡಿ ನಿವಾಸಿ ಸುರೇಶ್ ಪೂಜಾರಿ ಅವರ ಪತ್ನಿ, ಶ್ವೇತಾ (29) ಎಂದು ಗುರುತಿಸಲಾಗಿದೆ.

ಮೇ 16ರಂದು ಮನೆಯಲ್ಲಿ ಇಲಿ ಪಾಷಾಣ ಸೇವಿಸಿದ್ದಾಗಿ ತಿಳಿದುಬಂದಿದ್ದು, ಬಳಿಕ ಅವರನ್ನು ಮಂಗಳೂರಿನ ವೆನ್ಸಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೇ 23ರಂದು ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

ಘಟನೆಗೆ ನಿಖರ ಕಾರಣ ತನಿಖೆಯ ಬಳಿಕವೇ ತಿಳಿದುಬರಬೇಕಿದೆ. ಹೀಗಾಗಿ ಮಗಳ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮೃತಳ ತಂದೆ ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.







