ನವದೆಹಲಿ: ಕೇಂದ್ರ ಸರ್ಕಾರ ಬೆಳ್ಳಂಬೆಳಗ್ಗೆ ದೇಶದ ಗ್ರಾಹಕರಿಗೆ ʻತೈಲ ಶಾಕ್ʼ ಕೊಟ್ಟಿದೆ. ಸೋಮವಾರ (ಮೇ 25) ಪೆಟ್ರೋಲ್ ಮೇಲಿನ ಬೆಲೆ ಪ್ರತಿ ಲೀಟರ್ಗೆ 2.61 ರೂ. ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 2.71 ರೂ. ಏರಿಕೆ ಮಾಡಿದೆ. ಇದು ಕಳೆದ 10 ದಿನಗಳಲ್ಲಿ 4ನೇ ಬಾರಿಗೆ ಮಾಡಿದ ದರ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ ಪೆಟ್ರೋಲ್ ಬೆಲೆ ಈಗ ಲೀಟರ್ಗೆ 110.89 ರೂ. ಹಾಗೂ ಡೀಸೆಲ್ ಬೆಲೆ ಲೀಟರ್ಗೆ 98.80 ರೂ.ಗೆ ತಲುಪಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ.
ಮೇ 15 ರಂದು ಮೊದಲ ಬಾರಿಗೆ ಏಕಾಏಕಿ ಪೆಟ್ರೋಲ್, ಡೀಸೆಲ್ ಮೇಲಿನ ಬೆಲೆಯನ್ನು 3 ರೂ. ಹೆಚ್ಚಳ ಮಾಡಿತ್ತು. ಬಳಿಕ ಮೇ 23 ರಂದು ಪೆಟ್ರೋಲ್ ದರವನ್ನು 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆ ಮಾಡಲಾಗಿತ್ತು. ಇದೀಗ ಮತ್ತೆ ಪೆಟ್ರೋಲ್ ಮೇಲಿನ ಬೆಲೆ 2.61 ರೂ. ಮತ್ತು ಡೀಸೆಲ್ ಮೇಲಿನ ಬೆಲೆ 2.71 ರೂ. ಏರಿಸಿದ್ದು, ವಾಹನ ಸವಾರರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಎರಡೇ ವಾರದಲ್ಲಿ 4ನೇ ಬಾರಿಗೆ ತೈಲ ದರ ಏರಿಕೆ ಮಾಡಲಾಗಿದ್ದು, ವಾಹನ ಸವಾರರು ಆಕ್ರೋಶ ಹೊರಹಾಕಿದ್ದಾರೆ. ಪದೇ ಪದೇ ದರ ಏರಿಸಿದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.







