ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೋಮಂತಡ್ಕದ ಅಗರಿ ಕ್ರಾಸ್ ಬಳಿ ಭಾನುವಾರ ನಡೆದ ಬೈಕ್ ಹಾಗೂ ಕಾರಿನ ನಡುವಿನ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರ ಸೋಮವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.

ಕಾಯರ್ತಡ್ಕ ನಿವಾಸಿ ಗಣೇಶ್ (36) ಮೃತಪಟ್ಟ ಬೈಕ್ ಸವಾರ. ಉಜಿರೆ ಕಡೆಯಿಂದ ಕಕ್ಕಿಂಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದ ಗಣೇಶ್ ಅವರು, ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಕಾರಿನ ಬಲಭಾಗದ ಸೈಡ್ ಮಿರರ್ ಗೆ ಡಿಕ್ಕಿ ಹೊಡೆದಿದ್ದರು.

ಗಂಭೀರ ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೋಮವಾರ ಮೃತಪಟ್ಟರು. ಅವಿವಾಹಿತರಾಗಿದ್ದ ಅವರು ತಂದೆ,ತಾಯಿ ಸಹೋದರ ಹಾಗೂ ಸಹೋದರಿಯನ್ನು ಆಗಲಿದ್ದಾರೆ.







