ಬೆಳ್ತಂಗಡಿ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ರಾಜ್ಯ ಮಟ್ಟದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಬೆಳ್ತಂಗಡಿಯ ವಿದ್ಯಾರ್ಥಿನಿ ದಿಯಾ ಎಂ. ಕೋಟ್ಯಾನ್ ಭಾಜನರಾಗಿದ್ದಾರೆ.

ದಿಯಾ ಅವರು ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಹಾಗೂ ‘ವಿಜಯವಾಣಿ’ ದಿನಪತ್ರಿಕೆಯ ವರದಿಗಾರರಾದ ಮನೋಹರ್ ಬಳೆಂಜ ಮತ್ತು ಲಿಖಿತ ದಂಪತಿಯ ಪುತ್ರಿಯಾಗಿದ್ದಾರೆ.

ದಿಯಾ .ಎಂ ಕೊಟ್ಯಾನ್ 2025-26 ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್. ಸಿ ಪರೀಕ್ಷೆಯಲ್ಲಿ ಶೇ 97.12 ಶ್ರೇಣಿಯಲ್ಲಿ ತೇರ್ಗಡೆಯಾಗಿ ಉತ್ತಮ ಸಾಧನೆ ಮಾಡಿದ್ದು ದಕ್ಷಿಣ ಕನ್ನಡ ಜಿಲ್ಲೆಯಿಂದ ಒಟ್ಟು 13 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಚಿಕ್ಕಬಳ್ಳಾಪುರದ ಕನ್ನಡ ಭವನದಲ್ಲಿ ಮೇ 31 ರಂದು ನಡೆಯಲಿದೆ. ಇವರು ಭರತನಾಟ್ಯದಲ್ಲಿ ಜೂನಿಯರ್ ಪರೀಕ್ಷೆಯಲ್ಲಿ ತಾಲೂಕಿಗೆ ಪ್ರಥಮ ಸ್ಥಾನಿಯಾಗಿದ್ದಾರೆ.




