ಲಾಯಿಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್(ರಿ.) – ಗ್ರಾಮೀಣ ಶ್ರೇಷ್ಠತಾ ಕೇಂದ್ರ, ಲಾಯಿಲ ತರಬೇತಿ ಕೇಂದ್ರದಲ್ಲಿ ಕಂಪ್ಯೂಟರ್ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಮಾಧ್ಯಮ ವಿಭಾಗದ ನಿರ್ದೇಶಕರಾದ ಪ್ರದೀಪ್ಜಿ. ಶೆಟ್ಟಿ ಇವರು ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ, ಕಂಪ್ಯೂಟರ್ ಶಿಕ್ಷಣ ಎಂದರೆ ಒಂದು ಕೌಶಲ್ಯ. ವಿದ್ಯಾರ್ಥಿಗಳಿಗೆ ವಿದ್ಯೆಯ ಜೊತೆಗೆ ಕಂಪ್ಯೂಟರ್ಕೌಶಲ್ಯ ತುಂಬಾ ಮುಖ್ಯ. ಜೊತೆಗೆ ನಿಮ್ಮ ಮುಂದಿನ ವೃತ್ತೀ ಜೀವನಕ್ಕೆ ಸಂವಹನ ಕೂಡ ಮುಖ್ಯವಾಗಿರುತ್ತದೆ ಎಂದು ಶುಭ ಹಾರೈಸಿದರು.

ಕಂಪ್ಯೂಟರ್ ತರಬೇತಿಯು ರಾಷ್ಟ್ರೀಯ ಕಂಪ್ಯೂಟರ್ ಸಾಕ್ಷರತಾ ಸಮಿತಿ ಯೋಜನೆಯಡಿ ನೋಂದಾಯಿತವಾಗಿದ್ದು, ಕೌಶಲ್ಯ ಯೋಜನೆಯಡಿ ಪ್ರಮಾಣೀಕೃತ ಪ್ರಮಾಣ ಪತ್ರ ವಿತರಿಸಲಾಯಿತು.


ಒಟ್ಟು 38 ವಿದ್ಯಾರ್ಥಿಗಳು ಪ್ರಮಾಣಪತ್ರ ಪಡೆದುಕೊಂಡಿರುತ್ತಾರೆ. ಕಾರ್ಯಕ್ರಮದಲ್ಲಿ ತರಬೇತಿ ಕೇಂದ್ರದ ಉಪನ್ಯಾಸಕರಾದ ಧರಣಿ ಬಿ.ಪಿ. ಉಪಸ್ಥಿತರಿದ್ದರು. ಕಂಪ್ಯೂಟರ್ತರಬೇತುದಾರರು ಜಯಶ್ರೀ ಇವರು ನಿರ್ವಹಣೆ ಮಾಡಿ, ಧನ್ಯವಾದ ನೀಡಿದರು.







