ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಎಸ್ ಡಿ ಎಮ್ ಶಿಕ್ಷಣ ಸಂಸ್ಥೆಯಿಂದ ಮಕ್ಕಳ ಸುರಕ್ಷತೆ ಹಾಗೂ ಶಿಕ್ಷಕರ ಜವಾಬ್ದಾರಿಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.



ಬಾಲ ನ್ಯಾಯ ಮಂಡಳಿಯ ಸದ್ಯಸ್ಯರಾದ ಲಿಲ್ಲಿ ಪುಷ್ಪ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದರು .ಕಾರ್ಯಕ್ರಮದ ಉದ್ಘಾಟಕರಾಗಿ ಎಸ್ಡಿಎಂ ಶಿಕ್ಷಣ ಸಂಸ್ಥೆಗಳ ಶಿಕ್ಷಣ ಸಂಯೋಜಕರಾದ ಶ್ರೀ ಎಸ್ ಎನ್ ಕಾಕತ್ಕರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಎಸ್ ಡಿಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಯದ ಶ್ರೀ ಧನ್ಯ ಕುಮಾರ್ ಜೈನ್ ಉಪಸ್ಥಿತರಿದ್ದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಿ ಬಿ ಎಸ್ ಸಿ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ಶ್ರೀ ಮನಮೋಹನ್ ನಾಯಕ್, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರಾಜ್ಯ ಪಠ್ಯಕ್ರಮ ಉಜಿರೆ ಮುಖ್ಯೋಪಾಧ್ಯಾಯರಾದ ಶ್ರೀಮತಿ ವಿದ್ಯಾ ಲಕ್ಷ್ಮಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮಸ್ಥಳದ ಮುಖ್ಯೋಪಾಧ್ಯಾಯರಾದ ಶ್ರೀಮತಿ ಪರಿಮಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಕ್ಷಕರಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ನಿರೂಪಣೆ ಹಾಗೂ ಧನ್ಯವಾದವನ್ನು ಶಿಕ್ಷಕ ಶ್ರೇಯಾಂಸ ಜೈನ್ ನೆರವೇರಿಸಿ ಕೊಟ್ಟರು.







