ಬೆಳ್ತಂಗಡಿ : ಹಳ್ಳಿಗಾಡಿನ ಸಾವಿರಾರು ಮಹಿಳೆಯರ ಬದುಕಿಗೆ ಆಸರೆಯಾಗಿ, ಅವರಿಗೆ ಭದ್ರವಾದ ಜೀವನವನ್ನು ಕಟ್ಟಿಕೊಟ್ಟ ಬೆಳ್ತಂಗಡಿಯ ರೆಂಕೆದಗುತ್ತುವಿನ “ಸಿರಿ” ಗ್ರಾಮೋದ್ಯೋಗ ಸಂಸ್ಥೆಯ ನೂತನ ಸುಸಜ್ಜಿತ “ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್” ಇಂದು (ಮೇ 31) ಅಧಿಕೃತವಾಗಿ ಲೋಕಾರ್ಪಣೆಗೊಂಡಿತು.



ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ ಸಿ. ಪಿ. ರಾಧಾಕೃಷ್ಣನ್ ಅವರು ದೀಪ ಬೆಳಗಿಸಿ, ನಾಮಫಲಕ ಅನಾವರಣಗೊಳಿಸುವ ಮೂಲಕ ಕೈಗಾರಿಕಾ ಪಾರ್ಕನ್ನು ಉದ್ಘಾಟಿಸಿದರು.
ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಉಪಸ್ಥಿತಿ ಇದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರಾದ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸಿದ್ದರು.
ಗೌರವಾನ್ವಿತ ಅತಿಥಿಗಳಾಗಿ ಸಂಸದ ಬ್ರಿಜೇಶ್ ಚೌಟ, ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್, “ಸಿರಿ” ಸಂಸ್ಥೆಯ ಸಂಸ್ಥಾಪಕರು ಹಾಗೂ ಜ್ಞಾನವಿಕಾಸ ಕಾರ್ಯಕ್ರಮದ ಅಧ್ಯಕ್ಷರಾದ ಹೇಮಾವತಿ ವೀ. ಹೆಗ್ಗಡೆ, ಎಸ್.ಡಿ.ಎಂ ಶಿಕ್ಷಣ ಸಂಸ್ಥೆ ಉಜಿರೆಯ ಉಪಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್, ರಾಜ್ಯಸಭೆ ದೆಹಲಿ ಕಾರ್ಯದರ್ಶಿ ಡಾ.ಕೆ.ಎಸ್. ಸೋಮಶೇಖರ್ ಭಾಗವಹಿಸಿದ್ದರು.
ಸಿರಿ ಸಂಸ್ಥೆಯ ರಾಯಬಾರಿ ನಟ ರಮೇಶ್ ಅರವಿಂದ್, ಸಿರಿ ಸಂಸ್ಥೆಯ ನಿರ್ದೇಶಕ ರಾಜೇಶ್ ಪೈ, ಕುಸುಮ ದೇವಾಡಿಗ, ಪ್ರಸನ್ನ, ಯೋಜನೆಯ ಕಾರ್ಯನಿರ್ವಕ ನಿರ್ದೇಶಕ ಅನಿಲ್ ಕುಮಾರ್ ಎಸ್. ಎಸ್, ಶ್ರೇಯಸ್ ಕುಮಾರ್, ಎಸ್ ಡಿ ಎಂ ಆಸ್ಪತ್ರೆಯ ಕಾರ್ಯನಿರ್ವಹಕ ನಿರ್ದೇಶಕ ಎಂ.ಜನಾರ್ದನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗಣ್ಯರು, ಜನಪ್ರತಿನಿಧಿಗಳು, ಸಿರಿ ಸಂಸ್ಥೆಯ ಪದಾಧಿಕಾರಿಗಳು, ಗ್ರಾಹಕರು ಭಾಗವಹಿಸಿದ್ದರು. ಸುಪ್ರೀತಾ ಧರ್ಮಸ್ಥಳ ಇವರ ಪ್ರಾರ್ಥನೆ ಬಳಿಕ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ದನ್ ಸ್ವಾಗತಿಸಿದರು. ಉಜಿರೆ ಕಾಲೇಜು ಪ್ರಾಧ್ಯಾಪಕ ಡಾ. ಶ್ರೀಧರ ಭಟ್ ಕಾರ್ಯಕ್ರಮ ನಿರೂಪಿಸಿದರು.







