ಉಜಿರೆ : ನೇಣುಬಿಗಿದುಕೊಂಡು ಅಪ್ರಾಪ್ತ ಬಾಲಕಿರ್ಯೋವಳು ಆತ್ಮಹತ್ಯೆಗೆ ಶರಣಾದ ಘಟನೆ ಉಜಿರೆಯ ಶಿವಾಜಿನಗರದಲ್ಲಿ ಜೂ. 1 ರಂದು ಬೆಳಗ್ಗೆ ನಡೆದಿದೆ.



ಉಜಿರೆಯ ಖಾಸಗಿ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿನಿ ಶಾಲೆಗೆ ಹೊರಡುವ ವೇಳೆ ಈ ಘಟನೆ ನಡೆದಿರುವುದಾಗಿ ತಿಳಿದು ಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.






