ಬೆಳ್ತಂಗಡಿ: ಆಭರಣ ರಂಗದಲ್ಲಿ ತನ್ನದೇ ಆದ ವಿಶ್ವಾಸಾರ್ಹತೆ ಗಳಿಸಿರುವ ಮುಳಿಯ ಜ್ಯುವೆಲ್ಲರ್ಸ್ ಇದೀಗ ವಾಚ್ ಉದ್ಯಮಕ್ಕೂ ಕಾಲಿಟ್ಟಿದೆ.




ಬೆಳ್ತಂಗಡಿಯ ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆಯಲ್ಲಿ ನೂತನ ಉದ್ಯಮವಾದ ‘ಮುಳಿಯಾಸ್ ಟೈಮ್ ಜೋನ್’ ವಾಚ್ ಶೋರೂಂ ಜೂನ್ 4 ರಂದು ಅದ್ಧೂರಿಯಾಗಿ ಶುಭಾರಂಭಗೊಳ್ಳಲಿದೆ.
ಮುಳಿಯ ಗೋಲ್ಡ್ & ಡೈಮಂಡ್ಸ್ ಎಂ.ಡಿ. ಕೃಷ್ಣ ನಾರಾಯಣ ಮುಳಿಯ ಅಧ್ಯಕ್ಷತೆ ವಹಿಸಲಿದ್ದಾರೆ. ನೂತನ ಮಳಿಗೆಯನ್ನು ಉಜಿರೆ ಜನಾರ್ದನ ದೇವಸ್ಥಾನದ ಆಡಳಿತ ಮೋಕ್ತೇಸರರಾದ ಶರತ್ ಕೃಷ್ಣ ಪಡ್ವೆಟ್ನಾಯ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಕಾಮಿಡಿ ಕಿಲಾಡಿ ಮತ್ತು ಚಲನಚಿತ್ರ ನಿರ್ದೇಶಕ ಅನೀಶ್ ಪೂಜಾರಿ ವೇಣೂರು ಭಾಗವಹಿಸಲಿದ್ದಾರೆ.
ಟೈಟಾನ್, ಸೋನಾಟಾ, ಫಾಸ್ಟ್ರಾಕ್, ಜೂಪ್ ಕಂಪನಿಯ ವಾಚ್ ಗಳು ಲಭ್ಯವಿದ್ದು, ಉದ್ಘಾಟನೆಯ ದಿನ ಮೊದಲ 250 ಗ್ರಾಹಕರಿಗೆ ವಿಶೇಷ ಉಡುಗೊರೆ ನೀಡಲಾಗುವುದು ಎಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನ ವ್ಯವಸ್ಥಾಪಕರಾದ ಲೋಹಿತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




