ಗುರುವಾಯನಕೆರೆ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಿಂದ ಒಂದು ಶಾಕಿಂಗ್ ಸುದ್ದಿ ಹೊರಬಿದ್ದಿದೆ. ಇಲ್ಲಿನ ಖಾಸಗಿ ಕಾಲೇಜೊಂದರ ಹಾಸ್ಟೆಲ್ನಲ್ಲಿ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಸಂಭವಿಸಿದೆ.

ಮೃತ ವಿದ್ಯಾರ್ಥಿನಿಯನ್ನು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಮೂಲದವಳು ಎಂದು ಗುರುತಿಸಲಾಗಿದೆ. ಈಕೆ ಗುರುವಾಯನಕೆರೆಯ ಖಾಸಗಿ ಕಾಲೇಜಿನಲ್ಲಿ ಪಿಯುಸಿ ವಿಜ್ಞಾನ (PUC Science) ವಿಭಾಗದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು ಎನ್ನಲಾಗಿದೆ.
ವಿದ್ಯಾರ್ಥಿನಿಯ ಈ ನಿರ್ಧಾರಕ್ಕೆ ನಿಖರವಾದ ಕಾರಣ ಏನೆಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.







