ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೈಲು ಸಂಖ್ಯೆ 56626ರ ಕೊನೆಯ ಬೋಗಿಯಲ್ಲಿ ಗಲಾಟೆ ಎಬ್ಬಿಸಿ ಒಬ್ಬ ಪ್ರಯಾಣಿಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ





ಕೋಡಿಂಬಾಳ ರೈಲು ನಿಲ್ದಾಣದಲ್ಲಿ ರೈಲು ಹತ್ತಿದ್ದ ಮೂವರು ವ್ಯಕ್ತಿಗಳನ್ನು ಬಂಟ್ವಾಳ ರೈಲು ನಿಲ್ದಾಣದಲ್ಲಿ ರೈಲ್ವೆ ರಕ್ಷಣಾ ಪಡೆ (RPF) ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆಯ ಹಿನ್ನೆಲೆಯಲ್ಲಿ ರೈಲನ್ನು ಕೆಲ ನಿಮಿಷಗಳ ಕಾಲ ಬಂಟ್ವಾಳ ರೈಲ್ವೆ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಬಳಿಕ ಆರ್ಪಿಎಫ್ ಸಿಬ್ಬಂದಿ ರೈಲಿಗೆ ತೆರಳಿ ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡರು. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.







