ಉಜಿರೆ : (ಜೂ.೫) ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಆಚರಿಸಲಾಯಿತು.




ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಮ್ ಸ್ನಾತಕೋತ್ತರ ಕಾಲೇಜಿನ ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥೆ ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಪ್ರಾರ್ಥನ.ಜೆ ಆಗಮಿಸಿ ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆ ಹಾಗೂ ಪರಿಸರದ ಕುರಿತು ಮಾಹಿತಿ ನೀಡಿದರು. ಶಾಲಾ ಪರಿಸರದ ಕುರಿತು ವಿದ್ಯಾರ್ಥಿಗಳಿಂದ ಭಾಷಣ, ಗುಂಪು ಗಾಯನ, ರಸಪ್ರಶ್ನೆ ಹಾಗೂ ವಿದ್ಯಾರ್ಥಿಗಳಿಗೆ ತಮ್ಮ ತರಗತಿಗಳಲ್ಲಿ ಪರಿಸರ ಸಂಬಂಧಿತ ಚಿತ್ರಕಲೆ ಸ್ಪರ್ಧೆ, ಕಿರು ಪ್ರಹಸನ, ಗಿಡ ನೆಡುವ ಚಟುವಟಿಕೆಗಳನ್ನು ಆಯೋಜಿಸಲಾಗಿತ್ತು.
ದಿನದ ವಿಶೇಷವಾಗಿ ಉಜಿರೆಯ ಯಶೋವನಕ್ಕೆ ವಿದ್ಯಾರ್ಥಿಗಳಿಂದ ಭೇಟಿನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಕ್ಷಣಿಕ ಸಂಯೋಜಕ ಶಿಕ್ಷಕಿ ಶ್ರೀಮತಿ ಸುಮಾ ಶ್ರೀನಾಥ್ ವಹಿಸಿದ್ದರು. ವಿದ್ಯಾರ್ಥಿಗಳಾದ ಧೃತಿ ಹಾಗೂ ಅಭಿರಾಮ್ ಕಾರ್ಯಕ್ರಮ ನಿರೂಪಿಸಿದರು.






