ಬೆಳ್ತಂಗಡಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ-ಮುಂಡೂರು ಇಲ್ಲಿ ಈ ದಿನ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ಬೆಳ್ತಂಗಡಿ ಈ ಸಂಸ್ಥೆ ವತಿಯಿಂದ ಶಾಲೆಯ ಎಲ್ಲ ಮಕ್ಕಳಿಗೆ ಉತ್ತಮ ಗುಣಮಟ್ಟದ ಬ್ಯಾಗ್ ವಿತರಿಸಲಾಯಿತು.



ಈ ಕಾರ್ಯಕ್ರಮದಲ್ಲಿ ಮುಳಿಯದ ವ್ಯವಸ್ಥಾಪಕರಾದ ಶ್ರೀ ಲೋಹಿತ್ ಹಾಗೂ ಶ್ರೀ ಸುಧೀರ್ ಸುವರ್ಣ ಉಪಸ್ಥಿತರಿದ್ದರು.
ಅದೇ ರೀತಿ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರಾದ ಶ್ರೀ ಕೇಶವ ಮೂಲ್ಯ ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಕಲ್ಲೇಶ್ ಕೆಬಿ ಹಾಗೂ ಅತಿಥಿ ಶಿಕ್ಷಕರಾದ ಶ್ರೀ ದಿನೇಶ್ ರವರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದರು.







