ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಶ್ರೀ ಮನೋಜ್ ಕಟ್ಟೆಮಾರ್ ಧರ್ಮದರ್ಶಿಗಳು ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿಧ್ಯ ಕಟ್ಟೆಮಾರ್ ಇವರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.




ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ರಮೇಶ್ , ಡಾ|| ವೆಂಕಟೇಶ್ ಸ್ವಾಮಿ , ಮಹಾಂತೇಶ್ ವಿ ಕಿರಿಯ ಪ್ರಯೋಗಾಲಯ ತಂತ್ರಜ್ಞರು ಮತ್ತು ರಾಜ ಕೇಸರಿ ಸೇವಾ ಟ್ರಸ್ಟ್ (ರಿ) ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ .ಜಿ ಬೆಳ್ತಂಗಡಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಜಗದೀಶ್ ಲಾಯಿಲ , ಪ್ರವೀಣ್ ಆಚಾರ್ಯ ಗುರುವಾಯನಕೆರೆ, ಸಂದೇಶ್ ರೆಂಕೆದಗುತ್ತು ಇವರು ಉಪಸ್ಥಿತರಿದ್ದರು.







