ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ನಲ್ಲೇ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ.




ಜಿಲ್ಲೆಯ ಹಾಲಗಾನಹಳ್ಳಿ ಗ್ರಾಮದ ನಿವಾಸಿಯಾಗಿರುವ 24 ವರ್ಷದ ನಿರ್ಮಲಾ ಎಂಬ ಯುವತಿ, ದೇವನಹಳ್ಳಿ ಬಸ್ ನಿಲ್ದಾಣದಲ್ಲಿ ಬಸ್ ಹತ್ತಿದ ಕೆಲವೇ ಕ್ಷಣಗಳಲ್ಲಿ ವಿಷ ಸೇವಿಸಿದ್ದಾರೆ! ಬಸ್ನಲ್ಲಿ ಸೀಟು ಸಿಗುತ್ತಿದ್ದಂತೆ ಈಕೆ ವಿಷ ಕುಡಿದಿದ್ದು, ಬಸ್ನಲ್ಲಿದ್ದ ಸಹ ಪ್ರಯಾಣಿಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಈ ವೇಳೆ 48 ಮಂದಿ ಪ್ರಯಾಣಿಕರಿದ್ದ ಬಸ್ ಸಮೇತ ಚಾಲಕ ಹಾಗೂ ಕಂಡಕ್ಟರ್ ಖಾಸಗಿ ಆಸ್ಪತ್ರೆಗೆ ತೆರಳಿ ಸಮಯ ಪ್ರಜ್ಞೆ ಮೆರೆದಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಡಿಪೋಗೆ ಸೇರಿದ ಬಸ್ ಅನ್ನು ಆಸ್ಪತ್ರೆ ಬಳಿ ನಿಲ್ಲಿಸಿದ ಕೆಎಸ್ಆರ್ಟಿಸಿ ಸಿಬ್ಬಂದಿ ಪ್ರಯಾಣಿಕರನ್ನು ಬೇರೆ ಬಸ್ನಲ್ಲಿ ಕಳುಹಿಸಿದ್ದಾರೆ. ಕಂಡಕ್ಟರ್ ಸುಧಾಕರ್, ಡ್ರೈವರ್ ನಾರಾಯಣಸ್ವಾಮಿಯ ಸಮಯ ಪ್ರಜ್ಞೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.




