ಸವಣಾಲು: ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸವಣಾಲು ಇಲ್ಲಿ ಮುಳಿಯ ಜ್ಯುವೆಲ್ಲರ್ಸ್ ಮತ್ತು ವಜ್ರ ವ್ಯಾಪಾರಿಗಳು ಬೆಳ್ತಂಗಡಿ ಇವರ ವತಿಯಿಂದ ಶಾಲೆಯ ಸುಮಾರು 35 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಾಲಾ ಬ್ಯಾಗುಗಳನ್ನು ವಿತರಿಸಲಾಯಿತು.



ಕಾರ್ಯಕ್ರಮದಲ್ಲಿ ಮುಳಿಯ ಜ್ಯುವೆಲ್ಲರ್ಸ್ ಉದ್ಯೋಗಿಗಳಾದ ಕು| ಜಯಲಕ್ಷ್ಮೀ , ಶ್ರೀ ಕೃಷ್ಣಪ್ಪ, ಶ್ರೀ ಅಭಿಷೇಕ್ ,ಶಾಲೆಯ ಹಿರಿಯ ವಿದ್ಯಾರ್ಥಿಗಳು ಹಾಗೂ ಶಾಲಾಡಳಿತ ಮಂಡಳಿಯ ಕಾರ್ಯದರ್ಶಿ ಶ್ರೀ ಕೂಸಪ್ಪ ಗೌಡ, ಸದಸ್ಯರಾದ ಶ್ರೀ ಶಿವಪ್ರಸಾದ್ ಕೆ ಮತ್ತು ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದ ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೆ ಸಹಕರಿಸಿದರು.

ಗ್ರಾಮೀಣ ಶಾಲೆಯ ಮಕ್ಕಳಿಗೆ ಗುಣಮಟ್ಟದ ಬ್ಯಾಗುಗಳನ್ನು ನೀಡುವುದರ ಮೂಲಕ ಮುಗುಳಿ ಜ್ಯುವೆಲ್ಲರ್ಸ್ ಬೆಳ್ತಂಗಡಿ ಇವರು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪ್ರೋತ್ಸಾಹ ನೀಡುವುದರೊಂದಿಗೆ ತಮ್ಮ ಔದಾರ್ಯ ಮತ್ತು ಉಪಕಾರದ ಗುಣವನ್ನು ಸಾಕ್ಷೀಕರಿಸಿದರು.




