ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.


ಈ ಸಂದರ್ಭದಲ್ಲಿ ಬಾಲಕಾರ್ಮಿಕ ಪದ್ಧತಿ ಸಮಾಜದ ಮೇಲೆ ಉಂಟುಮಾಡುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲಾಯಿತು.
ಮಕ್ಕಳನ್ನು ದುಡಿಮೆಗೆ ತಳ್ಳುವ ಬದಲು ಅವರಿಗೆ ಗುಣಮಟ್ಟದ ಶಿಕ್ಷಣ, ಸುರಕ್ಷಿತ ವಾತಾವರಣ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅಗತ್ಯವಾದ ಅವಕಾಶಗಳನ್ನು ಒದಗಿಸುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂಬ ಸಂದೇಶವನ್ನು ತಿಳಿಸಲಾಯಿತು.


ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸಂಬಂಧಿಸಿದ ಪ್ರಮಾಣವಚನ ಸ್ವೀಕರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಹೇಮಲತಾ ಎಂ.ಆರ್. ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸೌಮ್ಯ ನೀತಾ ಕೆ ಎಸ್ ಶ್ರೇಯಾಂಸ ಜೈನ್ ,ಅಮಿತಾ ಪ್ರವೀಣ್ ,ಸಹನಾ ಶಾಲೆಯ ಶಿಕ್ಷಕ ವೃಂದ ಹಾಗೂ ಶಿಕ್ಷಕೇತರ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದರು.




