ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಶುಶ್ರೂಷಕಿಯೊಬ್ಬರಿಗೆ (Nurse) ಅವರದ್ದೇ ಸಹೋದ್ಯೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.




ಅದೇ ಆಸ್ಪತ್ರೆಯ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ (Pharmacy Head) ಚಂದ್ರಶೇಖರ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ.
ಅಲ್ಲದೆ, ಈ ವಿಚಾರವನ್ನು ಇತರರೊಂದಿಗೆ ಹಂಚಿಕೊಂಡರೆ ಕೆಲಸದಿಂದ ತೆಗೆದುಹಾಕುವುದಾಗಿ ಬೆದರಿಕೆ ಹಾಕಿದ್ದರು ಎಂದು ಮಹಿಳಾ ಸಿಬ್ಬಂದಿ ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ದೂರು ಸ್ವೀಕರಿಸಿದ ಬೆಳ್ತಂಗಡಿ ಪೊಲೀಸರು ಆರೋಪಿತ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.





