ಬೆಳ್ತಂಗಡಿ: ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ಪ್ರತಿಷ್ಠಿತ ನ್ಯಾಷನಲ್ ಮೀನ್ಸ್-ಕಮ್-ಮೆರಿಟ್ ಸ್ಕಾಲರ್ಶಿಪ್ (NMMS) ಪರೀಕ್ಷೆಯಲ್ಲಿ ತಾಲೂಕಿನ ಪಿಲ್ಯ ಶಾಲೆಯ ವಿದ್ಯಾರ್ಥಿನಿ ಪ್ರಣೀತಾ ಅವರು ಅತ್ಯಧಿಕ ಅಂಕ ಗಳಿಸುವ ಮೂಲಕ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾಗಿದ್ದಾರೆ.


ರಾಷ್ಟ್ರ ಮಟ್ಟದ ಈ ಕಠಿಣ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಪ್ರಣೀತಾ, ಶಾಲೆ ಹಾಗೂ ಪೋಷಕರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಇವರ ಈ ಗಮನಾರ್ಹ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹರ್ಷ ವ್ಯಕ್ತಪಡಿಸಿದ್ದು, ವಿದ್ಯಾರ್ಥಿನಿಗೆ ಶುಭ ಹಾರೈಸಿದ್ದಾರೆ.






