ಉಜಿರೆ: ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ , ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ(ರಿ.) , ಬಿರುವೆರ್ ಕುಡ್ಲ (ರಿ.) ಮಂಗಳೂರು ಇದರ ನೇತೃತ್ವದಲ್ಲಿ ಯಶೋ ವಿಜಯ (ಬದುಕು-ನೆನಪು-ಸ್ಮರಣೆ), ಶ್ರೀ ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ದಿ.ಕಾಶಿ ಶೆಟ್ಟಿಯವರ ಸ್ಮರಣಾರ್ಥವಾಗಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆಯು ಜೂನ್.13 ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಬದನಾಜೆಯಲ್ಲಿ ನಡೆಯಲಿದೆ.


ಕಾರ್ಯಕ್ರಮದ ಉದ್ಘಾಟನೆಯನ್ನು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀ ಶರತ್ ಕೃಷ್ಣ ಪಡ್ವೆಟ್ನಾಯರವರು ನೆರವೇರಿಸಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ನವಶಕ್ತಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ (ರಿ.) ಸ್ಥಾಪಕಾಧ್ಯಕ್ಷರಾದ ಶ್ರೀ ಉದಯ ಪೂಜಾರಿ, ಬೆಳ್ತಂಗಡಿಯ ನ್ಯಾಯವಾದಿಗಳಾದ ರೊ| ಬಿ.ಕೆ.ಧನಂಜಯ ರಾವ್, ರೊ| ಶ್ರೀಧರ್ ಕೆ.ವಿ., ಸುರಕ್ಷಾ ಮೆಡಿಕಲ್ ಉಜಿರೆ,


ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ (ರಿ.) ಬೆಳ್ತಂಗಡಿ ಅಧ್ಯಕ್ಷರು ಶ್ರೀ ತುಕರಾಂ ಬಿ.
ಪಟ್ಲ ಫೌಂಡೇಶನ್ ಬೆಳ್ತಂಗಡಿ ಘಟಕ ಅಧ್ಯಕ್ಷರು ಶ್ರೀ ಸುರೇಶ್ ಶೆಟ್ಟಿ, ಐ.ಟಿ ಮತ್ತು ವಸತಿ ನಿಲಯಗಳ ಆಡಳಿತ ವಿಭಾಗ ಎಸ್.ಡಿ.ಎಂ.ಇ. ಉಜಿರೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪೂರಣ್ ವರ್ಮ,
ಶ್ರೀ ರಾಜೇಶ್ ಶೆಟ್ಟಿ ನವಶಕ್ತಿ, ಉದ್ಯಮಿಗಳು, ಗುರುವಾಯನಕೆರೆ, ಶ್ರೀಮತಿ ಸುಚಿತಾ ರಾಜೇಶ್ ಶೆಟ್ಟಿ, ನವಶಕ್ತಿ, ಗುರುವಾಯನಕೆರೆ ಭಾಗವಹಿಸಲಿದ್ದಾರೆ.






