ಉಜಿರೆ : “ವಿದ್ಯಾರ್ಥಿಯ ಬದುಕಿನಲ್ಲಿ ವಿದ್ಯೆಯ ಜೊತೆಗೆ ಸಂಸ್ಕಾರವು ಇದ್ದಾಗ ಮಾತ್ರ ಪರಿಪೂರ್ಣ ವಿದ್ಯಾರ್ಥಿಯಾಗುತ್ತಾನೆ” ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಡಾ.ಮಹಾವೀರ್ ಜೈನ್ ಎಂದು ಎಂದು ಪೋಷಕರ ಜವಾಬ್ದಾರಿಗಳ ಕುರಿತು ಹೇಳಿದರು.


ಇವರು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜೂ.13 ರಂದು ನಡೆದ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 2026-27ನೇ ಶೈಕ್ಷಣಿಕ ಸಾಲಿನ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಶಿಕ್ಷಕ ಶ್ರೀ ಜಾರ್ಜ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.






