ಮೂಡುಬಿದಿರೆ: ಮೂಡುಬಿದಿರೆಯಲ್ಲಿ ವಿದ್ಯಾರ್ಥಿನಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ! ವಿವಾಹಿತ ವ್ಯಕ್ತಿಯೊಬ್ಬನ ಕಾಮಗಣ್ಣಿಗೆ ವಿದ್ಯಾರ್ಥಿನಿ ಬಲಿಯಾಗಲಿದ್ದಾಳೆ.


ಶಿರ್ತಾಡಿಯ ಕಜೆ ಪ್ರದೇಶದಲ್ಲಿ ವಿದ್ಯಾರ್ಥಿನಿಯೊಬ್ಬಳ ಮಾನಭಂಗಕ್ಕೆ ಯತ್ನಿಸಿದ ಆರೋಪದಡಿ ವಿವಾಹಿತ ವ್ಯಕ್ತಿಯ ವಿರುದ್ಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಜೆ ನಿವಾಸಿ ಲೋಕೇಶ್ ಎಂಬಾತ ಪ್ರಕರಣದ ಆರೋಪಿ ಎಂದು ತಿಳಿದುಬಂದಿದೆ. ಆರೋಪಿಯು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಮಾನಭಂಗಕ್ಕೆ ಯತ್ನಿಸಿದ್ಧಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.


ವಿದ್ಯಾರ್ಥಿನಿಯ ನೀಡಿದ ದೂರಿನ ಆಧಾರದ ಮೇಲೆ ಮೂಡುಬಿದಿರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆಯ ಕುರಿತು ತನಿಖೆ ನಡೆಸುತ್ತಿದ್ದಾರೆ.




