ಉಜಿರೆ : “ಮಕ್ಕಳನ್ನು ಆಸ್ತಿಯನ್ನಾಗಿ ಬೆಳೆಸಿ. ನಿಮ್ಮ ಕನಸನ್ನು ಮಕ್ಕಳ ಮೇಲೆ ಹೇರಬೇಡಿ. ಅವರಿಗೆ ಐಚ್ಛಿಕ ವಿಷಯದಲ್ಲಿ ಸ್ವಾತಂತ್ರ್ಯ ನೀಡಿ” ಎಂದು ಮೂಡಬಿದ್ರೆ ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ಆಡಳಿತ ನಿರ್ದೇಶಕರು ಡಾ.ಬಿ.ಪಿ ಸಂಪತ್ ಕುಮಾರ್ ಹೇಳಿದರು.


ಇವರು ಉಜಿರೆ ಎಸ್.ಡಿ.ಎಮ್ ಪದವಿ ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಜೂ. 13 ರಂದು ನಡೆದ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ 2026-27ನೇ ಶೈಕ್ಷಣಿಕ ಸಾಲಿನ 9ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಪೋಷಕರ ಸಭೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಷಯವಾರು ಶಿಕ್ಷಕರು ತಮ್ಮನ್ನು ಪರಿಚಯಿಸಿ, ಬೋಧನಾ ಶೈಲಿಯನ್ನು ವಿವರಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಶಿಕ್ಷಕಿ ಶ್ರೀಮತಿ ಸವಿತಾ ವೇದಪ್ರಕಾಶ್ ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯರಾದ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದರು.




