ಕಾಶಿಪಟ್ಣ: ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿ ಮಂಡಲ ರಚನಾ ಪ್ರಕ್ರಿಯೆಯು ಪ್ರಜಾಪ್ರಭುತ್ವ ಮಾದರಿಯಲ್ಲಿ ಯಶಸ್ವಿಯಾಗಿ ಜರುಗಿತು.


ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಚುನಾವಣೆಯಲ್ಲಿ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
7ನೇ ತರಗತಿಯ ಆದರ್ಶ್ ಮುಖ್ಯಮಂತ್ರಿಯಾಗಿ ಆಯ್ಕೆಯಾದನು. ಆರನೇ ತರಗತಿ ವೀಕ್ಷಿತ್ ವಿ. ಕೋಟ್ಯಾನ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದನು.






