ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿಗಳಾಗಿ ಉಜಿರೆ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ಡೀನ್ ಹಾಗೂ ಶಾಂತಿವನದ ಮುಖ್ಯ ವೈದ್ಯಾಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಭಾಗವಹಿಸಿ ಯೋಗದ ಮಹತ್ವದ ಕುರಿತು ಉಪನ್ಯಾಸ ನೀಡಿದರು. ಯೋಗವು ದೈಹಿಕ, ಮಾನಸಿಕ ಹಾಗೂ ಭಾವನಾತ್ಮಕ ಆರೋಗ್ಯವನ್ನು ಕಾಪಾಡುವ ಸಮಗ್ರ ಜೀವನ ಪದ್ಧತಿಯಾಗಿದ್ದು, ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಯೋಗಾಭ್ಯಾಸವನ್ನು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಯೋಗ ಸಪ್ತಾಹದ ಅಂಗವಾಗಿ ಎಸ್.ಡಿ.ಎಂ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಶ್ರೀಯುತ ಸೆಲ್ವ ಹಾಗೂ ಕುಮಾರಿ ಅಕ್ಷತಾ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳು, ಪ್ರಾಣಾಯಾಮ ಹಾಗೂ ಧ್ಯಾನದ ತರಬೇತಿಯನ್ನು ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ಯೋಗಾಭ್ಯಾಸದಲ್ಲಿ ತೊಡಗಿಸಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಮನಮೋಹನ್ ನಾಯ್ಕ್ ಕೆ.ಜಿ ವಹಿಸಿದ್ದರು.
ಶಿಕ್ಷಕಿ ಶ್ರೀಮತಿ ಸುಜನಾ ವಾಲ್ತಾಜೆ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕ ವೃಂದ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





