ಬೆಳಾಲು: ಇಲ್ಲಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಪೆರಿಯಡ್ಕದಲ್ಲಿ ಜೂನ್ 18 ರಂದು ಎಲ್.ಕೆ.ಜಿ ತರಗತಿಯ ಉದ್ಘಾಟನಾ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪರಿಕರಗಳ ವಿತರಣಾ ಸಮಾರಂಭ ಅತ್ಯಂತ ಯಶಸ್ವಿಯಾಗಿ ಜರುಗಿತು.


ದಾನಿಗಳಿಂದ ಉಚಿತ ಪರಿಕರಗಳ ಕೊಡುಗೆ:
ಕಾರ್ಯಕ್ರಮದ ಅಂಗವಾಗಿ ಉಜಿರೆಯ ಪ್ರಭಾತ್ ಸ್ಟೋರ್ ಇವರ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ಹಾಗೆಯೇ ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ.) ಇದರ ಸಂಚಾಲಕರಾದ ಶ್ರೀ ಕೆ. ಮೋಹನ್ ಕುಮಾರ್ ರವರ ಪ್ರಾಯೋಜಕತ್ವದಲ್ಲಿ ಮಕ್ಕಳಿಗೆ ಉಚಿತ ಬ್ಯಾಗ್ ಮತ್ತು ಕೊಡೆಗಳನ್ನು ವಿತರಿಸಿ ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.

ಈ ಅಪೂರ್ವ ಸಂದರ್ಭದಲ್ಲಿ ಆರಿಕೋಡಿ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀ ಹರೀಶ್ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಪ್ರಸಾದ್ ಕುಮಾರ್, ಮಿನಂದೇಲ್ ಸ್ಟೋರ್ ನ ಮಾಲಕರಾದ ಜಯಣ್ಣ ಗೌಡ ಹಾಗೂ ಗ್ರಾ.ಪಂ ಮಾಜಿ ಅಧ್ಯಕ್ಷೆ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಅಲ್ಲದೆ, ಚಿತ್ತಾರ ಯುವಶಕ್ತಿ ಗೆಳೆಯರ ಬಳಗದ ಅಧ್ಯಕ್ಷರಾದ ಮಾಧವ ಗೌಡ, ಶಾಲಾ ದಾನಿ ಉದಿತ್ ಕುಮಾರ್ ಜೈನ್ ಮತ್ತು ಶಾಲಾ ಮುಖ್ಯೋಪಾಧ್ಯಾಯರಾದ ಜಯಶ್ರೀ ಬಿ.ಕೆ. ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.







